ಶಿವಮೊಗ್ಗ : ಈದ್ ಮಿಲಾದ್ ಮೆರವಣಿಗೆ (Eid Milad Procession) ಸಂದರ್ಭದಲ್ಲಿ ಕಲ್ಲು ತೂರಾಟ (Stone Pelting) ನಡೆದಿರುವ ಪ್ರಕರಣ ಜಿಲ್ಲೆಯಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 35 ಜನರನ್ನು ಬಂಧಿಸಲಾಗಿದೆ.
ಶಿವಮೊಗ್ಗದ (Shivamogga) ರಾಗಿಗುಡ್ಡ (Ragigudda) ಶಾಂತಿನಗರದಲ್ಲಿ ಈ ಘಟನೆ ನಡೆದಿದೆ. ಎರಡು ಅನ್ಯ ಕೋಮಿನ ಮಧ್ಯೆ ಕಲ್ಲು ತೂರಾಟ ನಡೆದಿದ್ದು, 6 ಜನ ಗಾಯಗೊಂಡಿದ್ದಾರೆ. ಪರಿಣಾಮ ಘಟನೆಯಲ್ಲಿ 7 ಮನೆ, 1 ಕಾರು, 1 ಬೈಕ್ ಜಖಂಗೊಂಡಿವೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 35ಕ್ಕೂ ಅಧಿಕ ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸೆ. 28ನೇ ದಿನದಂದು ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಮೆರವಣಿಗೆ ಇದ್ದ ಹಿನ್ನೆಲೆಯಲ್ಲಿ ಮುಸ್ಲಿಂ ಬಾಂಧವರು ನಿನ್ನೆ ಈದ್ ಮಿಲಾದ್ ಮೆರವಣಿಗೆ ಇಟ್ಟುಕೊಂಡಿದ್ದರು. ಹಸಿರು ಬಾವುಟ, ಟಿಪ್ಪು ಸುಲ್ತಾನ್, ಔರಂಗಜೇಬ್ ಕಟೌಟ್ ಹಾಕಿದ್ದರು. ಅಲ್ಲದೇ, ಮೆರವಣಿಗೆಯು ಮಧ್ಯಾಹ್ನ ಗಾಂಧಿ ಬಜಾರಿನ ಜಾಮೀಯಾ ಮಸೀದಿಯಿಂದ ಆರಂಭವಾಗಿತ್ತು. ರಾಗಿಗುಡ್ಡದಿಂದಲೂ ಮೆರವಣಿಗೆಯಲ್ಲಿ ಭಾಗಿಯಾಗಲು ಕೆಲ ಮುಸ್ಲಿಂ ಬಾಂಧವರು ತೆರಳುತ್ತಿದ್ದರು. ಈ ವೇಳೆ ರಾಗಿಗುಡ್ಡದ ಶನೇಶ್ವರ ದೇವಸ್ಥಾನದ ಹತ್ತಿರ ಮೆರವಣಿಗೆ ಸಾಗುವಾಗ ಕಲ್ಲು ತೂರಾಟ ನಡೆದಿದೆ. ಈ ಸಂದರ್ಭದಲ್ಲಿ ಪ್ರತಿಯಾಗಿ ಮೆರವಣಿಗೆಯಲ್ಲಿ ಇದ್ದವರು ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಹಿಂದೂಗಳಿಗೆ ಸೇರಿದ 7 ಮನೆಗಳು ಹಾಗೂ 1 ಬೈಕ್, 1 ಕಾರು ಜಖಂ ಆಗಿವೆ.