ಕೋಲಾರ: ಇಲ್ಲಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನೆ ಸಭೆ ನಡೆಯಿತು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು, ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಮಾತ್ರ ಜೈಲಿಗೆ ಕಳುಹಿಸಲಾಗಿದೆ. ತಲೆಮರೆಸಿಕೊಂಡಿರುವವರನ್ನು ಏಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿದ್ದರು. ಅಲ್ಲದೇ, ಎರಡು ದಿನಗಳಲ್ಲಿ ಅವರನ್ನು ಬಂಧಿಸುವಂತೆ ಸೂಚಿಸಿದ್ದಾರೆ.
ಇದು ಕ್ರೂರ ಕೃತ್ಯ, ಇಂತಹದ್ದನ್ನು ನಾವು ಅಪ್ಪಿತಪ್ಪಿಯೂ ಸಹಿಸಲ್ಲ. ಇಂತಹ ಘಟನೆ ರಾಜ್ಯದಲ್ಲಿ ಮತ್ತೆ ಯಾವತ್ತೂ ಸಂಭವಿಸಬಾರದು ಎಂದು ಖಡಕ್ ಆಗಿ ಎಚ್ಚರಿಕೆ ನೀಡಿದ್ದಾರೆ.