ಬೆಳಗಾವಿ: ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿದ್ದ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು. ಈ ಘಟನೆ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ನಡೆದಿತ್ತು. ಮಹಿಳೆಯ ಮೇಲೆ ಹಲ್ಲೆ ನಡೆಯುವುದನ್ನು ವಿರೋಧಿಸಿ, ಪೊಲೀಸರಿಗೆ ಮಾಹಿತಿ ನೀಡಿದವರಿಗೆ ಇಲಾಖೆ ಸನ್ಮಾನಿಸಿದೆ.
ಪೊಲೀಸರು ಸನ್ಮಾನಿಸಿ, ಪ್ರಶಂಸನೀಯ ಪತ್ರ ನೀಡಿ ಅಭಿನಂದಿಸಿದ್ದಾರೆ. ವಂಟಮೂರಿ ಗ್ರಾಮದ ನಿವಾಸಿ ಜಹಾಂಗೀರ್ ತಹಶಿಲ್ದಾರ, ವಾಸೀಂಮ್ ಮಕಾನದಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದ್ದಪ್ಪ ಹೊಳಿಕಾರ್ ಅವರನ್ನು ಸನ್ಮಾನಿಸಲಾಗಿದೆ. ಈ ವೇಳೆ ಕೋರ್ಟ್ ನೀಡಿದ್ದ ಪ್ರಶಂಸನೀಯ ಪತ್ರವನ್ನು ಪೊಲೀಸ್ ಆಯುಕ್ತ ಸಿದ್ದರಾಮಪ್ಪ ಜಹಾಂಗೀರ್ ಎಂಬುವವರಿಗೆ ನೀಡಿ ಗೌರವಿಸಿದ್ದಾರೆ. ಮೂವರಿಗೆ ತಲಾ ಐದು ಸಾವಿರ ರೂಪಾಯಿ ನಗದು ಬಹುಮಾನ ವಿತರಿಸಲಾಗಿದೆ.