ಕೊಪ್ಪಳ: ನಾಲ್ಕು ತಿಂಗಳ ಮಗುವಿನ ಮೇಲೆ ಕೋತಿ ದಾಳಿ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಕುಷ್ಟಗಿ ತಾಲೂಕಿನ ವೀರುಪಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮನೆಗೆ ನುಗ್ಗಿದ ಕೋತಿಯು ಮಲಗಿದ್ದ ಮಗುವಿನ ಮೇಲೆ ದಾಳಿ ನಡೆಸಿದೆ. ಪರಿಣಾಮ ಮಗು ಗಂಭೀರವಾಗಿ ಗಾಯಗೊಂಡಿದ್ದು, ಮಗುವನ್ನು ತಾವರಗೇರಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕೋತಿಗಳು ಗ್ರಾಮಸ್ಥರ ಮೇಲೆ ಕೂಡ ಪದೇ ಪದೇ ದಾಳಿ ಮಾಡುತ್ತಿದ್ದು, ಈ ಕುರಿತು ಗ್ರಾಪಂ ಅಧಿಕಾರಿಗಳು ಸಾರ್ವಜನಿಕರು ಮನವಿ ಮಾಡಿದರೂ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕೂಡಲೇ ಕೋತಿಗಳ ದಾಳಿಯ ಕುರಿತು ಗಮನ ಹರಿಸಿ, ಮುಕ್ತಿ ನೀಡಬೇಕು ಎಂದು ಜನರು ಮನವಿ ಮಾಡಿದ್ದಾರೆ.