ಮಂಗಳೂರು: ಕ್ರೈಸ್ತ ಚರ್ಚ್ ಧರ್ಮ ಗುರುವೊಬ್ಬಾತ ವೃದ್ಧರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಘಟನೆ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುಣಚದ ಎರ್ಮೆತ್ತಡ್ಕ ಎಂಬಲ್ಲಿ ನಡೆದಿದೆ. ಮನೆಲ ಚರ್ಚ್ ನ ಧರ್ಮಗುರು ಫಾದರ್ ನೆಲ್ಸನ್ ಓಲಿವೆರಾ ಹಲ್ಲೆ ನಡೆಸಿದ ಪಾದ್ರಿ ಎನ್ನಲಾಗಿದೆ.
ಗ್ರೆಗರಿ ಮೊಂತೆರೋ (79) ಮತ್ತು ಅವರ ಪತ್ನಿ ಫಿಲೋಮಿನಾ(72) ಹಲ್ಲೆಗೊಳಗಾದ ವೃದ್ಧ ದಂಪತಿ. ಪಾದ್ರಿ ಆ ವೃದ್ಧರನ್ನು ಕಾಲಿನಿಂದ ಒದೆಯುತ್ತಿರುವ ಹಾಗೂ ಎಳೆದಾಡುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಫಾದರ್ ಮನೆಗೆ ಭೇಟಿ ನೀಡಿದ್ದ ವೇಳೆ ದೇಣಿಗೆ ವಿಷಯವಾಗಿ ಈ ಗಲಾಟೆ ನಡೆದಿದೆದೆ ನಲಾಗಿದೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.