ಬೆಳಗಾವಿ: ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಓರ್ವ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದಲ್ಲಿ ನಡೆದಿದೆ.
ಕಳೆದ ರಾತ್ರಿ ಕಾಕತಿ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆಯುತ್ತಿತ್ತು. ಈ ವೇಳೆ ಗಲಾಟೆ ಬಿಡಿಸಲು ಹೋದ ಯುವಕನಿಗೆ ಚೂರಿಯಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಚೂರಿ ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.
ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡ ಕಾಕತಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಗಲಾಟೆಯಲ್ಲಿ ತೊಡಗಿದ್ದ ಉಳಿದವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದು, ಗಲಾಟೆಗೆ ಕಾರಣ ಏನು ಎಂಬುದರ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
ವಕ್ಫ್ ಭೂ ಕಬಳಿಕೆ ವಿರುದ್ಧದ ಹೋರಾಟಕ್ಕೆ ಮಣಿದ ಸರ್ಕಾರ : ಸಮಿತಿ ರಚನೆಗೆ ಒಪ್ಪಿಗೆ – ಆರ್. ಆಶೋಕ್
ವಕ್ಫ್ ಮಂಡಳಿ ಹಿಂದೂಗಳು ಮತ್ತು ರೈತರ ಆಸ್ತಿ ಕಬಳಿಕೆ ಮಾಡುತ್ತಿರುವ ಬಗ್ಗೆ ಸದನದಲ್ಲಿ ದಾಖಲೆ ಸಮೇತ ಮಾತನಾಡಿದ್ದೇನೆ. ಈ ಹೋರಾಟದಲ್ಲಿ ಬಿಜೆಪಿಗೆ ತಕ್ಕ ಮಟ್ಟಿನ ಜಯ ದೊರಕಿದೆ....