ಬೆಳಗಾವಿ: ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಓರ್ವ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದಲ್ಲಿ ನಡೆದಿದೆ.
ಕಳೆದ ರಾತ್ರಿ ಕಾಕತಿ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆಯುತ್ತಿತ್ತು. ಈ ವೇಳೆ ಗಲಾಟೆ ಬಿಡಿಸಲು ಹೋದ ಯುವಕನಿಗೆ ಚೂರಿಯಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಚೂರಿ ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.
ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡ ಕಾಕತಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಗಲಾಟೆಯಲ್ಲಿ ತೊಡಗಿದ್ದ ಉಳಿದವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದು, ಗಲಾಟೆಗೆ ಕಾರಣ ಏನು ಎಂಬುದರ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
ಪ್ರಜಾಪ್ರಭುತ್ವ ಉಳಿಸುವ ಕಾಳಜಿ ಇದ್ದರೆ ಸ್ಥಳೀಯ ಸಂಸ್ಥೆ ಚುನಾವಣೆ ಘೋಷಿಸಿ; ಕುಮಾರಸ್ವಾಮಿ
ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು, ಪ್ರಜಾಪ್ರಭುತ್ವ ಉಳಿಸುವ ಕಾಳಜಿ ಇದ್ದರೇ ಮೊದಲು...