ದೆಹಲಿ: ಪೆಂಡಾಲ್ ಕುಸಿದ ಪರಿಣಾಮ 8 ಜನರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ.
ಈ ಘಟನೆ ದೆಹಲಿಯ ಜವಾಹರಲಾಲ್ ನೆಹರು ಕ್ರೀಡಾಂಗಣ ಹತ್ತಿರ ನಡೆದಿದ್ದು, ಅಲ್ಲಿ ಹಾಕಿದ್ದ ಪೆಂಡಾಲ್ ಕುಸಿತದಿಂದ 8 ಜನ ಗಾಯಗೊಂಡಿದ್ದಾರೆ ಎಂದು ವರದಿ ಹೇಳಿದೆ. ದೆಹಲಿ ಅಗ್ನಿಶಾಮಕ ದಳದ ಹಲವಾರು ವಾಹನಗಳು ಮತ್ತು ಆಂಬ್ಯುಲೆನ್ಸ್ಗಳು ಸ್ಥಳದಲ್ಲಿವೆ. ಹುಲ್ಲುಹಾಸಿನ ಹತ್ತಿರ ನಡೆಯುತ್ತಿರುವ ನಿರ್ಮಾಣ ಕಾರ್ಯದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಈ ಘಟನೆಯಲ್ಲಿ 8 ಜನ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ಹೇಳಿದ್ದಾರೆ.