ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ದೂರು ದಾಖಲು
ತುಮಕೂರು: ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಅರಗ ಜ್ಞಾನೇಂದ್ರ ಜಾತಿಗಳ ಮಧ್ಯೆ ಕೋಮುಗಲಭೆ ಸೃಷ್ಟಿ ಮಾಡುವ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಹೀಗಾಗಿ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದ್ದಾರೆ ತುಮಕೂರಿನಲ್ಲಿ ದೂರು ದಾಖಲಾಗಿದೆ.
ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ಧ ತುಮಕೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಶಿಹುಲಿಕುಂಟೆಮಠ್ ನೇತೃತ್ವದಲ್ಲಿ ತುಮಕೂರು ಎಎಸ್ಪಿ ಉದೇಶ್ಗೆ ದೂರು ಸಲ್ಲಿಸಿದ್ದಾರೆ.
ಮಾಧ್ಯಮದ ಮುಂದೆ ಪ್ರತಿಕ್ರಿಯೆ ನೀಡುವಾಗ ಉರ್ದು ಮಾತನಾಡದಿದ್ದಕ್ಕೆ ಹತ್ಯೆ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಈಗ ಬಹಳಷ್ಟು ವಿವಾದಕ್ಕೆ ಕಾರಣವಾಗಿದೆ. ಸಚಿವರ ವಿರುದ್ಧ ಹಲವರು ಕಿಡಿ ಕಾರಿದ್ದಾರೆ.
ಹೇಳಿಕೆ ತಪ್ಪಾಗಿದೆ ಎಂದ ಗೃಹ ಸಚಿವರು
ಈ ಹಿಂದೆ ನಾನು ನೀಡಿದ್ದ ಹೇಳಿಕೆ ತಪ್ಪಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದರು. ಮೂಲಗಳ ಮಾಹಿತಿ ಆಧಾರವಾಗಿ ಉರ್ದು ಮಾತನಾಡದಿದ್ದಕ್ಕೆ ಹತ್ಯೆ ಮಾಡಿದ್ದಾರೆ ಎಂದು ಹೇಳಿದ್ದೆ. ನನ್ನ ಹೇಳಿಕೆ ತಪ್ಪಾಗಿದೆ ಎಂದು ಆರಗ ಜ್ಞಾನೇಂದ್ರ ತಿಳಿಸಿದ್ದರು.
ಬೈಕ್ ಡಿಕ್ಕಿಯಾಗಿ ಗಲಾಟೆಯಾಗಿ ಚಂದ್ರುಗೆ ಚೂರಿ ಇರಿತ ಆಗಿದೆ. ಆಸ್ಪತ್ರೆಗೆ ಹೋಗುವಷ್ಟರಲ್ಲಿ ರಕ್ತಸ್ರಾವವಾಗಿ ಚಂದ್ರು ಸಾವನ್ನಪ್ಪಿದ್ದಾರೆ.