ಜೈಪುರ: ಹಾಸ್ಟೇಲ್ ನಲ್ಲಿ ವಿದ್ಯಾರ್ಥಿ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ಹಾಸ್ಟೇಲ್ ನಲ್ಲಿ ಅಡುಗೆ ಮಾಡುವವ ಹಾಗೂ ನಿರ್ವಾಹಕನನ್ನು ಪೊಲೀಸರು ಬಂಧಿಸಿದ್ದಾರೆ, ರಾಜಸ್ಥಾನದ (Rajasthan) ಕೋಟಾ (Kota) ಜಿಲ್ಲೆಯಲ್ಲಿ ಈ ಘಟನೆ ನಡೆದೆ. ಬ್ಲಾಕ್ ಮೇಲ್ ಮಾಡಿ ಪದೇ ಪದೇ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ.
ಬಿಹಾರ (Bihar) ಮೂಲದ ಬಾಲಕಿ ತನ್ನ ಸಹೋದರಿಯೊಂದಿಗೆ ಹಾಸ್ಟೇಲ್ ನಲ್ಲಿ ಇದ್ದಳು ಎನ್ನಲಾಗಿದೆ. ಅಡುಗೆಯಾತ ಪ್ರತಿದಿನ ಆಹಾರ ನೀಡುತ್ತ ಪರಿಚಯವಾಗಿದ್ದಾನೆ. ಆ ನಂತರ ಮದ್ಯ ಕುಡಿಸಿ ಅತ್ಯಾಚಾರ ನಡೆಸಿದ್ದಾನೆ ಎಂದು ಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ.
ಆ ನಂತರ ನಿರ್ವಾಹಕ, ಅಡುಗೆ ಮಾಡುವವನನ್ನು ಮದುವೆಯಾಗಿ, ಈ ಸಮಸ್ಯೆ ಇತ್ಯರ್ಥ ಮಾಡುವಂತೆ ಹೇಳಿದ್ದಾನೆ. ಅಲ್ಲದೇ, ಯಾರಿಗಾದರೂ ಹೇಳಿದರೆ ಫೋಟೋ ಹಾಗೂ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
ಸದ್ಯ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.