ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ತಲ್ಲಣ ಸೃಷ್ಟಿಸಿದ್ದು, ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದೆ. ರಾಜ್ಯದಲ್ಲಿ ಇಂದು ಬರೋಬರಿ 45 ಮಂದಿಯಲ್ಲಿ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕು ಪೀಡಿತರ ಸಂಖ್ಯೆ 750 ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ರಾಜ್ಯ ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ರಾಜ್ಯದಲ್ಲಿ ಬರೋಬರಿ 45 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಸೋಂಕಿತರ ಸಂಖ್ಯೆ 750ಕ್ಕೆ ಏರಿಕೆಯಾಗಿದೆ. ಒಂದೇ ದಿನ ಇಷ್ಟು ಏಕಾಏಕಿ ಸೋಂಕಿತರ ಸಂಖ್ಯೆ ಕಂಡುಬAದಿರುವುದು ಇದೇ ಮೊದಲು. ಇನ್ನು ಸೋಂಕಿತರ ಪೈಕಿ ಭಟ್ಕಳದಲ್ಲಿ-12, ಬೆಳಗಾವಿ ಜಿಲ್ಲೆಯಲ್ಲಿ 11, ದಾವಣಗೆರೆ ಜಿಲ್ಲೆಯಲ್ಲಿ 14 ಬೆಂಗಳೂರಿನಲ್ಲಿ 7, ಬಳ್ಳಾರಿಯ ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ.








