ಮೈಸೂರು, ಮೇ 18: ಕೆಲವು ದಿನಗಳ ಹಿಂದೆ ಕೊರೊನಾ ಮುಕ್ತವಾಗಿದ್ದ ಮೈಸೂರು ಜಿಲ್ಲೆಯಲ್ಲಿ ಇಂದು ಮತ್ತೆ ಕೊರೊನಾ ವೈರಸ್ ಸೋಂಕು ಪ್ರಕರಣ ಪತ್ತೆಯಾಗಿದೆ. ಮಹಾರಾಷ್ಟ್ರದ ಮುಂಬೈನಿಂದ ಹಿಂತಿರುಗಿದ 46 ವರ್ಷದ ಪುರುಷನಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ಜಿಲ್ಲೆಯಲ್ಲಿ ಮೊದಲ ಕೊರೊನಾ ಸೋಂಕು ಪ್ರಕರಣ ಮಾರ್ಚ್ 21 ರಂದು ಪತ್ತೆಯಾಗಿತ್ತು. ಮಾರ್ಚ್ 21ರಂದು ದುಬೈನಿಂದ ಮೈಸೂರಿನ ಬಂದಿದ್ದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ನಂತರ ಜ್ಯುಬಿಲಿಯಂಟ್ ನೌಕರರು, ತಬ್ಲಿಘಿಗಳು ಸೇರಿದಂತೆ ಒಟ್ಟು 90 ಪಾಸಿಟಿವ್ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿತ್ತು. ಎಲ್ಲಾ 90 ಕೊರೊನಾ ಪ್ರಕರಣಗಳು ಗುಣಮುಖರಾಗಿ ಮನೆಗೆ ತೆರಳುವುದರೊಂದಿಗೆ ಸಾಂಸ್ಕೃತಿಕ ನಗರ ಮೈಸೂರು ಕೊರೊನಾ ಸೋಂಕು ಮುಕ್ತವಾಗಿತ್ತು. ಅಲ್ಲದೇ ಕಳೆದ 18 ದಿನಗಳಿಂದ ಮೈಸೂರಿನಲ್ಲಿ ಯಾವುದೇ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿರಲಿಲ್ಲ. ಇದೀಗ ಹೊರರಾಜ್ಯದಿಂದ ಬಂದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿ ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ಪ್ರಾರಂಭವಾಗಿದೆ.
ಕೊಲಂಬೊದಲ್ಲಿ ಭಾರತದ ಆರ್ಭಟ ಪಾಕಿಸ್ತಾನ ಧೂಳಿಪಟ: ಟಿ20 ವಿಶ್ವಕಪ್ ಅಖಾಡದಲ್ಲಿ ಟೀಮ್ ಇಂಡಿಯಾ ದರ್ಬಾರ್
ದಾಯಾದಿ ರಾಷ್ಟ್ರಗಳ ಕಾಳಗದಲ್ಲಿ ಮತ್ತೊಮ್ಮೆ ಭಾರತ ಮೇಲುಗೈ ಸಾಧಿಸಿದೆ. 2026ರ ಟಿ20 ವಿಶ್ವಕಪ್‌ನ ಅತ್ಯಂತ ಹೈವೋಲ್ಟೇಜ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 61 ರನ್‌ಗಳ ಅಂತರದಲ್ಲಿ ಬಗ್ಗುಬಡಿದ...








