ಮೈಸೂರು: ಬಟ್ಟೆ ತೊಳೆಯುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ದಂಪತಿ ನಾಲೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಹರತಲೆಯಲ್ಲಿ ನಡೆದಿದೆ. ಗ್ರಾಮದ ಶಂಕರ್ ಹಾಗೂ ಬೇಬಿ ದಂಪತಿಯೇ ಬಟ್ಟೆ ತೊಳೆಯುತ್ತಿದ್ದ ಸಂದರ್ಭದಲ್ಲಿ ನಾಲೆಗೆ ಬಿದ್ದು ಸಾವನ್ನಪ್ಪಿರುವ ದುರ್ದೈವಿಗಳು. ದಂಪತಿ ಬಟ್ಟೆ ತೊಳೆಯಲು ಹೋದಾಗ ಪತ್ನಿ ಕಾಲು ಜಾರಿ ಬಿದ್ದಿದ್ದಾರೆ.
ಅವರನ್ನು ರಕ್ಷಿಸಲು ಶಂಕರ್ ಮುಂದಾದಾಗ ಅವರು ಕೂಡ ನಾಲೆಗೆ ಬಿದ್ದಿದ್ದಾರೆ. ಆದರೆ, ಇಬ್ಬರು ನಾಲೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಪಕ್ಕದ ಕಳಲೆ ಗ್ರಾಮದ ಬಳಿ ಮೃತದೇಹ ಪತ್ತೆಯಾಗಿದ್ದು, ಈ ಕುರಿತು ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.