ಬೆಳಗಾವಿ : ವಿದ್ಯುತ್ ತಂತಿ ತಗುಲಿದ ಪರಿಣಾಮ ದಂಪತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ತಾಲೂಕಿನ ಬಿಜಗರ್ಣಿ ಗ್ರಾಮದ ಜಮೀನಿನಲ್ಲಿ ನಡೆದಿದೆ. ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ದಂಪತಿಗಳು ತುಳಿದ ಪರಿಣಾಮ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಮಿತ್ ದೇಸಾಯಿ(32), ಲತಾ ದೇಸಾಯಿ(27)ಸಾವನ್ನಪ್ಪಿದ ದುರ್ದೈವಿಗಳು.
ವಿದ್ಯುತ್ ತಂತಿ ತಗುಲಿದ ಪರಿಣಾಮ ಪತಿ ಒದ್ದಾಡುತ್ತಿದ್ದರು. ಅವರನ್ನು ರಕ್ಷಿಸಲು ಹೋಗಿದ್ದ ಪತ್ನಿ ಕೂಡ ಸಾವನ್ನಪ್ಪಿದ್ದಾರೆ. ಬೆಳೆ ಕ್ರಿಮಿನಾಶಕ ಸಿಂಪಡಣೆ ವೇಳೆ ಈ ಘಟನೆ ನಡೆದಿದೆ. ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ದಂಪತಿ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಈ ಕುರಿತು ಬೆಳಗಾವಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.








