ಮೈಸೂರು: ಕ್ಯಾಂಟರ್ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ದಂಪತಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಹುಣಸೂರಿನಲ್ಲಿನ ಕನಕ ಭವನದ ಹತ್ತಿರ ನಡೆದಿದೆ. ಮಂಜುನಾಥ ಬಡಾವಣೆಯ ನಿವಾಸಿ ರಾಜು (64) ಮತ್ತು ಅವರ ಪತ್ನಿ ಸುನಂದಾ (55) ಸಾವನ್ನಪ್ಪಿದ ದುರ್ದೈವಿಗಳು. ಹುಣಸೂರು ಮಾರ್ಗವಾಗಿ ಬರುತ್ತಿದ್ದ ಕ್ಯಾಂಟರ್ ವೇಗವಾಗಿ ಬಂದು ಬೈಕ್ ಗೆ ಡಿಕ್ಕಿ ಹೊಡೆದಿದೆ.
ಈ ವೇಳೆ ದಂಪತಿ ಕೆಳಗೆ ಬಿದ್ದಿದ್ದಾರೆ. ತೀವ್ರ ರಕ್ತಸ್ರಾವದಿಂದಾಗಿ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸ್ಥಳೀಯರು ಚಾಲಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಕುರಿತು ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.