ರಾಮನಗರ: ಧರ್ಮಯುದ್ಧಕ್ಕೆ ಉತ್ತರ ನೀಡಲು ಮಂಜುನಾಥ್ ಕಣಕ್ಕೆ ಇಳಿದಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಧರ್ಮಯುದ್ಧ ನಡೆಯುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಮಂಜುನಾಥ್ ವೈದ್ಯಕೀಯ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಹಾಗೂ ಸೇವೆ ಮಾಡಿದ್ದಾರೆ. ಅಮಿತ್ ಶಾ ಮಂಜುನಾಥ್ ಅವರನ್ನು ಬಿಜೆಪಿ ಅಭ್ಯರ್ಥಿ ಮಾಡಿದ್ದಾರೆ. ಬಿಜೆಪಿ-ಜೆಡಿಎಸ್ ಒಂದೇ ದೇಹದ ಎರಡು ಕಣ್ಣುಗಳಿದ್ದಂತೆ. ಎರಡು ಚುನಾವಣೆಯಲ್ಲಿ ನನ್ನ ಮೇಲೆ ವಿಶ್ವಾಸವಿಟ್ಟು ಗೆಲ್ಲಿಸಿದ್ದೀರಿ. ನಾನು ರಾಮನಗರ ಬಿಟ್ಟು ಹೋಗಲ್ಲ. ಇವತ್ತು ಅನಿವಾರ್ಯವಾಗಿ ಬಿಜೆಪಿ ಜೊತೆ ಅಭಿವೃದ್ಧಿಗಾಗಿ ಕೈ ಜೋಡಿಸಿದ್ದೇವೆ. ನನ್ನನ್ನು ಚನ್ನಪಟ್ಟಣ ಜನ ಕ್ಷಮಿಸಬೇಕು ಎಂದು ಮನವಿ ಮಾಡಿದ್ದಾರೆ.
ದೇಶದ ಜನರು ಮೋದಿ ಬೆಂಬಲಿಸಿದ್ದಾರೆ. ರಾಜ್ಯದಲ್ಲಿ 28 ಮೈತ್ರಿ ಅಭ್ಯರ್ಥಿಗಳು ಗೆಲ್ಲಬೇಕು. ಕಾಂಗ್ರೆಸ್ ನಾಯಕರು ಜನರಿಗೆ ಆಮೀಷ ತೋರಿಸುತ್ತಿದ್ದಾರೆ. ಸೀರೆ, ಕುಕ್ಕರ್ ನೀಡುತ್ತಿದ್ದಾರೆ. ಜನರಿಗಾಗಿ ಮಿಡಿಯುವ ಮಂಜುನಾಥ್ ಅವರನ್ನು ಗೆಲ್ಲಿಸಲು ನೀವೆಲ್ಲ ಸಹಕರಿಸಬೇಕು ಎಂದು ಹೇಳಿದ್ದಾರೆ.