ರಾಯಚೂರು: ವೈದ್ಯರೊಬ್ಬರು ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಸಿಂಧನೂರು ನಗರದ ಅಕ್ಕಮಹಾದೇವಿ ಆಸ್ಪತ್ರೆಯಲ್ಲಿ ನಡೆದಿದೆ. 34 ವರ್ಷದ ಜನರಲ್ ಸರ್ಜನ್ ಡಾ. ಚಂದ್ರಶೇಖರ ಮಾದಿನೂರು ಎಂಬ ವೈದ್ಯರೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ವೈದ್ಯರು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿ ರೋಗಿಗಳನ್ನು ಪರೀಕ್ಷಿಸುತ್ತಿದ್ದರು. ಈ ಸಂದರ್ಭದಲ್ಲಿ ಒತ್ತಡ ಎನ್ನಿಸಿದ್ದರಿಂದ ವಿಶ್ರಾಂತಿ ಪಡೆಯಲು ಮನೆಗೆ ಹೋಗಲು ಮುಂದಾಗಿದ್ದಾಗ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ವೈದ್ಯರ ಮನೆ ಆಸ್ಪತ್ರೆಯ ಮೇಲ್ಮಹಡಿಯಲ್ಲಿಯೇ ಇರುವುದರಿಂದಾಗಿ ಮೆಟ್ಟಿಲು ಹತ್ತಲು ಮುಂದಾಗಿದ್ದಾರೆ. ಈ ವೇಳೆ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಆದರೆ, ಕೆಲವೇ ಕ್ಷಣಗಳಲ್ಲಿ ಕುಸಿತು ಬಿದ್ದು ಸಾವನ್ನಪ್ಪಿದ್ದಾರೆ. ಹಠಾತ್ ಹೃದಯಾಘಾತದಿಂದ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.