ಶಿವಮೊಗ್ಗ: ಇಲ್ಲಿಯ ಮೆಗ್ಗಾನ್ ಜಿಲ್ಲಾಸ್ಪತ್ರೆಯ ವೈದ್ಯರು ಅಪರೂಪದ ಪ್ರಕರಣದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ, ಎಲ್ಲರೂ ಮೆಚ್ಚುವ ಸಾಧನೆ ಮಾಡಿದ್ದಾರೆ. ಈ ಮೂಲಕ ಗರ್ಭೀಣಿ ಮಹಿಳೆಗೆ ಮರುಜೀವ ನೀಡಿದ್ದಾರೆ.
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಹಳೆ ಜೋಗದ ವೀರಭದ್ರಪ್ಪನವರ ಪತ್ನಿ 31 ವರ್ಷದ ಬೇಬಿ ಎಂಬ ಮಹಿಳೆ ಹೊಟ್ಟೆ ನೋವಿಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಮಹಿಳೆಯ ಪರೀಕ್ಷೆ ನಡೆಸಿದಾಗ ಒಂದೂವರೆ ತಿಂಗಳ ಗರ್ಭಿಣಿಯಾಗಿರುವುದು ಕಂಡು ಬಂದಿತ್ತು. ಆದರೆ, ಗರ್ಭಕೋಶದ ಬದಲು ಗರ್ಭನಾಳದಲ್ಲಿ ಗರ್ಭ ಧರಿಸಿರುವುದು ತಿಳಿದು ಬಂದಿತ್ತು.
ಇದು ಪ್ರಪಂಚದಲ್ಲಿಯೇ ಅತಿ ವಿರಳವಾದ, ಅಪರೂಪದ ‘ಬಾಂಬೆ ಬ್ಲಡ್ ಗ್ರೂಪ್’ ಎನ್ನಲಾಗಿದೆ. ಡಾ.ಲೇಪಾಕ್ಷಿ ಬಿ.ಜಿ ಮತ್ತು ಡಾ.ಅಶ್ವಿನಿ ವೀರೇಶ್ ತಂಡದ ಸತತ ಪ್ರಯತ್ನ ಹಾಗೂ ವೈದ್ಯಕೀಯ ಅಧೀಕ್ಷಕ ಡಾ.ತಿಮ್ಮಪ್ಪ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಸಿದ್ದನಗೌಡ ಪಿ ಮಾರ್ಗದರ್ಶನದಲ್ಲಿ ಗರ್ಭೀಣಿಗೆ ಬಾಂಬೆ ಬ್ಲಡ್ ಬೇರೆ ಬೇರೆ ಜಿಲ್ಲೆಯಿಂದ ವ್ಯವಸ್ಥೆ ಮಾಡಿ, ಕೊನೆಗೆ ಯಶಸ್ವಿ ಆಪರೇಷನ್ ಮಾಡಿದ್ದಾರೆ. ಈ ಮೂಲಕ ವೈದ್ಯರ ಕಾರ್ಯಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.