ಭಾರತ ಹಾಗೂ ಪಾಕ್ ಮಧ್ಯೆ ನಡೆಯುತ್ತಿರುವ ಪಂದ್ಯ ಮಳೆಯಿಂದಾಗಿ ತಡವಾಗಿ ಆರಂಭವಾಗಿದೆ. ಹೀಗಾಗಿ ಅಭಿಮಾನಿಗಳಲ್ಲಿ ಸಂತಸ ಮೂಡಿದೆ.
ಮೂರನೇ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಆರಂಭಿಕನಾಗಿ ಕಣಕ್ಕಿಳಿದಿದ್ದ ಹಿಟ್ಮ್ಯಾನ್ 49 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 56 ರನ್ ಗಳಿಸಿದ್ದಾರೆ. 4 ಭರ್ಜರಿ ಸಿಕ್ಸ್ಗಳೊಂದಿಗೆ ಏಷ್ಯಾಕಪ್ ಏಕದಿನ ಟೂರ್ನಿಯಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ಬರೆದಿದ್ದಾರೆ.
ಏಷ್ಯಾಕಪ್ (ಏಕದಿನ) ಇತಿಹಾಸದಲ್ಲೇ ಅತ್ಯಧಿಕ ಸಿಕ್ಸ್ ಬಾರಿಸಿದ್ದ ಪಾಕಿಸ್ತಾನದ ಶಾಹಿದ್ ಅಫ್ರಿದಿ ಅವರ ದಾಖಲೆ ಸರಿಗಟ್ಟಿದ್ದಾರೆ. ಅಫ್ರಿದಿ 21 ಏಕದಿನ ಇನಿಂಗ್ಸ್ಗಳಿಂದ ಒಟ್ಟು 26 ಸಿಕ್ಸ್ ಸಿಡಿಸಿದ್ದಾರೆ. ರೋಹಿತ್ ಶರ್ಮಾ 24 ಏಕದಿನ ಇನಿಂಗ್ಸ್ಗಳ ಮೂಲಕ ಒಟ್ಟು 26 ಸಿಕ್ಸ್ಗಳನ್ನು ಬಾರಿಸಿದ್ದಾರೆ. ಏಷ್ಯಾಕಪ್ ಏಕದಿನ ಟೂರ್ನಿಯಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಅಫ್ರಿದಿ ದಾಖಲೆಯನ್ನು ಸರಿಗಟ್ಟಿದ್ದಾರೆ.
ಈ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ ಏಷ್ಯಾಕಪ್ನಲ್ಲಿ ಒಂದು ತಂಡದ ವಿರುದ್ಧ ಅತೀ ಹೆಚ್ಚು ಅರ್ಧಶತಕ ಸಿಡಿಸಿದ ದಾಖಲೆ ಕೂಡ ರೋಹಿತ್ ಶರ್ಮಾ ಮಾಡಿದ್ದಾರೆ. ಈ ದಾಖಲೆ ಈ ಮೊದಲು ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. ಸಚಿನ್ ಶ್ರೀಲಂಕಾ ವಿರುದ್ಧ 5 ಅರ್ಧ ಶತಕ ಬಾರಿಸಿದ್ದರು. ರೋಹಿತ್ ಪಾಕ್ ವಿರುದ್ಧ 6 ಅರ್ಧ ಶತಕ ಸಿಡಿಸಿದ್ದಾರೆ.








