ಮಂಡ್ಯ : ಸಾರಿಗೆ ಸಂಸ್ಥೆಯ ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ.
ಶ್ರೀರಂಗಪಟ್ಟಣ (Srirangapatna) ತಾಲೂಕಿನ ಟಿ.ಎಂ. ಹೊಸೂರು ಗೇಟ್ ಹತ್ತಿರ ಬೆಂಗಳೂರು-ಮೈಸೂರು ಹೆದ್ದಾರಿ ಪಕ್ಕದ ಸರ್ವಿಸ್ ರಸ್ತೆ ಮೇಲೆ ವೇಗವಾಗಿ ಕೆಎಸ್ಆರ್ಟಿಸಿ ಬಸ್ ಆಗಮಿಸುತ್ತಿತ್ತು, ಈ ಸಂದರ್ಭದಲ್ಲಿ ಹೆದ್ದಾರಿಯ ಅಂಡರ್ ಪಾಸ್ ಮೂಲಕ ಟಿಪ್ಪರ್ ವಾಹನ, ಬಸ್ ಗೆ ಅಡ್ಡ ಬಂದಿದೆ.
ಆಗ ಚಾಲಕ ಬಸ್ ಅನ್ನು ಎಡ ತಿರುವು ತೆಗೆದುಕೊಂಡಿದ್ದಾರೆ. ಹೀಗಾಗಿ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರ ಜೀವ ಉಳಿದಿದೆ. ಎದೆ ಝಲ್ ಎನಿಸುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.