ಚಿಕ್ಕಬಳ್ಳಾಫುರ: ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಸಿಕ್ಕಸಿಕ್ಕವರನ್ನು ಕಚ್ಚಿದ ಘಟನೆ ನಡೆದಿದೆ.
ಈ ಘಟನೆ ಇಲ್ಲಿಯ ಎಂ.ಜಿ ರಸ್ತೆಯಲ್ಲಿ ನಡೆದಿದೆ. ಮಹೇಶ್ ಎಂಬ ವ್ಯಕ್ತಿ ಕುಡಿದ ಮತ್ತಿನಲ್ಲಿ ಮೂವರು ಪೊಲೀಸ್ ಸಿಬ್ಬಂದಿ ಸೇರಿದಂತೆ ಹಲವು ಜನರನ್ನು ಕಚ್ಚಿದ್ದಾನೆ.
ಕುಡುಕನಿಂದಾಗಿ ಪೊಲೀಸ್ ಸಿಬ್ಬಂದಿಗಳಾದ ಶೇಖರ್, ಪೆಂಚಲಯ್ಯ, ಅಶ್ವತ್ಥ್ ಗಾಯಗೊಂಡಿದ್ದಾರೆ. ಸದ್ಯ ಸ್ಥಳೀಯರ ಸಹಾಯದಿಂದ ಪೊಲೀಸರು ಕುಡುಕನನ್ನು ಹಿಡಿದು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಯಲ್ಲಿ ಕೂಡ ಈ ವ್ಯಕ್ತಿ ರಂಪಾಟ ಮಾಡಿದ್ದಾನೆ ಎನ್ನಲಾಗಿದೆ.