ರಾಯಚೂರು: ರೈತರೊಬ್ಬರು (Farmer) ಸಾಲಬಾಧೆ (Indebtedness) ತಾಳಲಾರದೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯಚೂರು (Raichur) ಜಿಲ್ಲೆಯ ಸಿಂಧನೂರು (Sindhanur) ತಾಲೂಕಿನ ಉಪ್ಪಲದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಮಲ್ಲಪ್ಪ ತೆಗ್ಗಿಹಾಳ (32) ಸಾವನ್ನಪ್ಪಿರುವ ಯುವ ರೈತ. ಇವರು ಬ್ಯಾಂಕ್ ಹಾಗೂ ಖಾಸಗಿಯಾಗಿ ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದರು. ರೈತರ ಸಾಲ ತೀರಿಸಲು ಆಗದೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಇವರು ಮನೆಯ ಬಳಿ ವಿದ್ಯುತ್ ತಂತಿ ಹಿಡಿದು ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.