ಕೊಪ್ಪಳ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊಲದಲ್ಲಿ ಬೆಳೆದು ನಿಂತಿದ್ದ ಕಬ್ಬು ಬೆಂಕಿಗೆ ಆಹುತಿಯಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಕುಣಿಕೇರಿ ಗ್ರಾಮದ ಜಮೀನಿನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಈ ಘಟನೆ ನಡೆದಿದೆ. ಘಟನೆಯಲ್ಲಿ 3 ಎಕರೆಯಲ್ಲಿ ಬೆಳೆದು ನಿಂತಿದ್ದ ಅಪಾರ ಪ್ರಮಾಣದ ಕಬ್ಬು ಸುಟ್ಟಿದೆ. ಬರಗಾಲದಲ್ಲಿಯೂ ಕಷ್ಟಪಟ್ಟು ಜಿಲ್ಲೆಯ ಕುಣಿಕೇರಿಯ ರೈತ ಬಸವರಾಜ ಸಬರದ 3 ಎಕರೆ ಜಮೀನಿನಲ್ಲಿ ಕಬ್ಬು ಬೆಳೆದಿದ್ದರು. ಆದರೆ, ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಬ್ಬು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಹೊಲದಲ್ಲಿದ್ದ ಹೈಟೆನ್ಷನ್ ವೈರ್ ನ ಶಾರ್ಟ್ ಸರ್ಕ್ಯೂಟ್ನಿಂದಾಗಿ ಈ ಘಟನೆ ನಡೆದಿದೆ. ಕೂಡಲೇ ರೈತ ಹಾಗೂ ಕೂಲಿಕಾರರು ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದರೆ, ಹತೋಟಿಗೆ ಬಂದಿಲ್ಲ. ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಲಕ್ಷಾಂತರ ಬೆಲೆ ಬಾಳುವ ಕಬ್ಬು ಬೆಂಕಿಗೆ ಆಹುತಿಯಾಗಿದ್ದು, ಪರಿಹಾರಕ್ಕಾಗಿ ರೈತರು ಮನವಿ ಮಾಡಿದ್ದಾರೆ.