ಕಾರು ಮತ್ತು KSRTC ಬಸ್ ನಡುವೆ ಭೀಕರ ಅಫಘಾತ – ಇಬ್ಬರ ಸಾವು
ಕಾರು ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಭೀಕರ ಅಪಘಾತ ನಡೆದಿದ್ದು ಕಾರಿನಲ್ಲಿದ್ದ ಇಬ್ಬರು ದಾರುಣವಾಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ಇಂದು ಬೆಳಗ್ಗೆ ಸುಮಾರು 5:30ರ ವೇಳೆ ಭೀಕರ ಅಪಘಾತ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು ದೊಡ್ಡಗುಣಿ ಕೆರೆ ಏರಿ ಮೇಲೆ ನಡೆದಿದೆ. ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಅವರನ್ನ ಚಿಕ್ಕನಾಯಕನಹಳ್ಳಿ ತಾಲೂಕಿನ ಕಂದಿಕೆರೆ ಗ್ರಾಮದ ಗಿರೀಶ್(37) ಹಾಗೂ ಮಾನ್ಯ(17) ಎಂದು ಗುರುತಿಸಲಾಗಿದೆ.
ಇನ್ನು ಕೆಎಸ್ಆರ್ಟಿಸಿ ಬಸ್ನಲ್ಲಿದ್ದ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಗುಬ್ಬಿ ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ರಾಕೇಶ್ ಎಂಬುವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








