ವಿಜಯಪುರ: ತಂದೆಯೊಬ್ಬ ಮೂವರು ಮಕ್ಕಳಿಗೆ ವಿಷ ಹಾಕಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪಾಪಿ ತಂದೆ ತನ್ನ ಮೂವರು ಮಕ್ಕಳಿಗೆ ವಿಷ ಹಾಕಿದ್ದಾನೆ. ಈ ಘಟನೆ ಬಸವನಬಾಗೇಬಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ನಡೆದಿದೆ.
ಅಲ್ಲದೇ, ವಿಷ ಹಾಕಿದ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೂಡಲೇ ಮೂವರು ಮಕ್ಕಳು ಹಾಗೂ ತಂದೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ತಂದೆ ಭೀರಣ್ಣ ಎಂಬಾತನೇ ವಿಷ ಹಾಕಿದವನು.
ಮಕ್ಕಳಾದ ಶಾಂತಾ ಹಾಗೂ ರಾಯಣ್ಣ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಭೀರಣ್ಣ ಹಾಗೂ ಮಗ ಸಂಗಮೇಶ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭೀರಣ್ಣನ ಪತ್ನಿ ಮನೆ ಬಿಟ್ಟು ಹೋಗಿದ್ದರಿಂದಾಗಿ ತನ್ನ ಮೂವರು ಮಕ್ಳಳಿಗೆ ವಿಷ ಹಾಕಿದ್ದಾನೆ ಎನ್ನಲಾಗಿದೆ. ಈ ಕುರಿತು ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.