ಪಾಪಿ ಮಹಿಳೆಯೊಬ್ಬಳು ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಕಾಮುಕರ ಬಲಿ ಬಿಟ್ಟಿದ್ದು, ಆಗ ನಾಲ್ವರು ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆಯೊಂದ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ.
ಮೂವರು ಅಪ್ರಾಪ್ತ ಬಾಲಕ ಸೇರಿದಂತೆ ನಾಲ್ವರು ಅತ್ಯಾಚಾರವೆಸಗಿದ್ದಾರೆ. ಉತ್ತರ ದೆಹಲಿಯ ಸದರ್ ಬಜಾರ್‌ನಲ್ಲಿ 12 ವರ್ಷದ ಅಪ್ರಾಪ್ತೆಯ ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಈ ಘಟನೆ ಜ. 1ರಂದು ನಡೆದಿದ್ದು, ಈ ಕುರಿತು ಗುರುವಾರ ದೂರು ದಾಖಲಾಗಿದೆ. ಆರೋಪಿಗಳ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಉತ್ತರ ಡಿಸಿಪಿ ಮನೋಜ್ ಕುಮಾರ್ ಮೀನಾ ಹೇಳಿದ್ದಾರೆ.
ಅಲ್ಲದೇ, ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಐವರು ಆರೋಪಿಗಲನ್ನು ಬಂಧಿಸಲಾಗಿದೆ.
ಮಹಿಳೆಯೂ ಆರೋಪಿಯಾಗಿದ್ದು, ಆಮಿಷ ಒಡ್ಡಿ ಬಾಲಕಿಯನ್ನು ಕರೆದುಕೊಂಡು ಹೋಗಿದ್ದಾಳೆ ಎನ್ನಲಾಗಿದೆ.








