Sandhya Topno – ತಪಾಸಣೆ ವೇಳೆ ವಾಹನ ಹರಿಸಿ, ಮಹಿಳಾ ಸಬ್ ಇನ್ಸ್ಪೆಕ್ಟರ್ ಹತ್ಯೆ
ತಪಾಸಣೆ ವೇಳೆ ಪಿಕಪ್ ವಾಹನ ಹರಿಸಿ, ಮಹಿಳಾ ಸಬ್ ಇನ್ಸ್ಪೆಕ್ಟರ್ ಹತ್ಯೆ ಮಾಡಿರುವ ಘಟನೆ ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ನಡೆದಿದೆ.
ಇಂದು ಬೆಳಿಗ್ಗೆ ನಸುಕಿನ ಜಾವ ಗೋವುಗಳನ್ನ ಕಳ್ಳಸಾಗಣೆ ಮಾಡುತ್ತಿದ್ದ ಮಾಹಿತಿ ಆಧಾರಿಸಿ ಪಿಕಪ್ ವಾಹನವನ್ನ ತಪಾಸಣೆ ಮಾಡಲು ಮುಂದಾದಾಗ ಅನಾಮಧೇಯ ವ್ಯಕ್ತಿ ಮಹಿಳಾ ಸಬ್ ಇನ್ಸ್‌ಪೆಕ್ಟರ್ ಸಂಧ್ಯಾ ಟೋಪ್ನೋ ಅವರ ಮೇಲೆ ಗಾಡಿ ಹರಿಸಿದ್ದಾನೆ.
ಸಬ್ ಇನ್ಸ್‌ಪೆಕ್ಟರ್ ಸಂಧ್ಯಾ ಟೋಪ್ನೊ ಅವರನ್ನು ತಕ್ಷಣ ರಾಜೇಂದ್ರ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಅಲ್ಲಿ ವೈದ್ಯರು ಅವರು ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಂಚಿ ಪೊಲೀಸರು ತಿಳಿಸಿದ್ದಾರೆ.
ಹರಿಯಾಣದಲ್ಲಿ ನಿನ್ನೆ ಅಕ್ರಮವಾಗಿ ನಡೆಸಲಾಗುತ್ತಿದ್ದ ಗಣಿ ಪ್ರದೇಶಕ್ಕೆ ತೆರಳಿ ತಪಾಸಣೆ ನಡೆಸುತ್ತಿದ್ದಾಗ ಪೊಲೀಸ್ ವಾಹನದ ಮೇಲೆ ಟ್ರಕ್ ಹತ್ತಿಸಿ ಡಿಎಸ್ಪಿಯನ್ನು ದಾರುಣವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯ ಮೇಲೆ ಗುಂಡು ಹಾರಿಸಿ ಬಂಧಿಸಲಾಗಿದೆ.
A Female Sub Inspector Sandhya Topno Mowed Down To Death During Vehicle Check Last Night In Ranchi








