ಹಾಸನ: ಕಬಡ್ಡಿ (Kabaddi) ಆಡುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮಧ್ಯೆ ಜಗಳ ಆರಂಭವಾಗಿ, ಅಪ್ರಾಪ್ತನೊಬ್ಬ ಮಚ್ಚು ಬೀಸಿರುವ ಘಟನೆ ನಡೆದಿದೆ.
ಹಾಸನ (Hassan) ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಈ ಘಟನೆ ನಡೆದಿದೆ. ಆ. 30ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಪಿಯುಸಿ ಕಾಲೇಜುಗಳ ಕ್ರೀಡಾಕೂಟದಲ್ಲಿ ಕಬಡ್ಡಿ ಪಂದ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಕಬಡ್ಡಿ ಆಟ ನಡೆಯುತ್ತಿದ್ದ ಸಂದರ್ಭದಲ್ಲಿ ಎರಡು ಕಾಲೇಜುಗಳ ವಿದ್ಯಾರ್ಥಿಗಳ ಗುಂಪಿನ ನಡುವೆ ಜಗಳ ನಡೆದಿದೆ.
ಆಗ ಅಪ್ರಾಪ್ತ ವಿದ್ಯಾರ್ಥಿ ಮೇಲೆ ಮತ್ತೋರ್ವ ಅಪ್ರಾಪ್ತ ವಿದ್ಯಾರ್ಥಿ ಬ್ಯಾಗ್ ಮಚ್ಚು ಬೀಸಿದ್ದಾನೆ. ಈ ಮಚ್ಚನ್ನು ಬ್ಯಾಗ್ ನಲ್ಲಿ ಇಟ್ಟುಕೊಂಡು ಬಂದಿದ್ದ ಎನ್ನಲಾಗಿದೆ. ಆದರೆ, ಕೂದಲೆಳೆ ಅಂತರದಲ್ಲಿ ಅಪ್ರಾಪ್ತ ವಿದ್ಯಾರ್ಥಿ ಪಾರಾಗಿದ್ದು, ಆತಂಕಕ್ಕೆ ಕಾರಣವಾಗಿದೆ.
ಮಚ್ಚು ಬೀಸಿದ್ದಕ್ಕೆ ಕೋಪಗೊಂಡ ಇನ್ನಿತರ ವಿದ್ಯಾರ್ಥಿಗಳು ಮಚ್ಚು ಬೀಸಿದವನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಹೀಗಾಗಿ ಆತ ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಕುರಿತು ಕೆ.ಆರ್.ಪುರಂ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.








