ತುಮಕೂರು: ಕ್ಷುಲ್ಲಕ ಕಾರಣಕ್ಕೆ ಯುವಕರ ಮಧ್ಯೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ.
ಈ ಗಲಾಟೆ ತುಮಕೂರಿನ (Tumakuru) ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯಲ್ಲಿ ಯುವಕನಿಗೆ ಚಾಕು ಇರಿಯಲಾಗಿದೆ. ರಿಷಾಬ್ ಪಾಷ (20) ಕೊಲೆಯಾದ ಯುವಕ. ಮನೆಯಲ್ಲಿ ಊಟ ಮಾಡುತ್ತಿದ್ದವನನ್ನು ಕರೆಸಿ ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
ನಗರದ ಮರಳೂರು ದಿಣ್ಣೆಯಲ್ಲಿ ಈ ಘಟನೆ ನಡೆದಿದೆ. ಹುಡುಗಿ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಯುವಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲು ಯತ್ನಿಸಲಾಗಿದ್ದು, ಮಾರ್ಗಮಧ್ಯೆ ಯುವಕ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.








