ಮಡಿಕೇರಿ: ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ.
ಈ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಡೆದಿದೆ. 22 ವರ್ಷದ ಸಾಜಿದ್ ಕೊಲೆಯಾಗಿರುವ ದುರ್ದೈವಿ. ಮೈಸೂರು ರಸ್ತೆಯಲ್ಲಿರುವ ಶ್ರೀನಿಧಿ ಎಂಬುವವರ ಸರ್ವಿಸ್ ಸ್ಟೇಷನ್ ನಲ್ಲಿ ಬೈಕ್ ಸರ್ವಿಸ್ ಮಾಡಲೆಂದು ಸಾಜೀದ್ ಆಗಮಿಸಿದ್ದ. ಈ ಸಂದರ್ಭದಲ್ಲಿ ಇಬ್ಬರ ಮಧ್ಯೆ ಜಗಳ ಆರಂಭವಾಗಿದೆ. ಈ ಸಂದರ್ಭದಲ್ಲಿ ಕೋಪಗೊಂಡ ಶ್ರೀನಿಧಿ ಹರಿತವಾದ ಆಯುಧದಿಂದ ಸಾಜಿದ್ಗೆ ಇರಿದಿದ್ದಾನೆ.
ಗಂಭೀರವಾಗಿ ಗಾಯಗೊಂಡಿದ್ದ ಸಾಜಿದ್ ನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಈ ಕುರಿತು ಕುಶಾಲನಗರ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಬಂಧಿಸಿರುವ ಪೊಲೀಸರು, ವಿಚಾರಣೆ ನಡೆಸುತ್ತಿದ್ದಾರೆ.