ಬೆಂಗಳೂರು: ಮೆಟ್ರೋ ನಿಲ್ದಾಣದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದ, ಪರಿಣಾಮ ನಾಲ್ಕು ಬೈಕ್ ಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.
ಈ ಘಟನೆ ನಗರದ ರಾಜಾಜಿನಗರ ಮೆಟ್ರೋ ನಿಲ್ದಾಣ (Rajajinagar Metro Station) ಬಳಿ ನಡೆದಿದ್ದು, ಅಲ್ಲಿ ನಿಂತಿದ್ದ 4 ಬೈಕ್ ಗಳಿಗೆ ಬೆಂಕಿ ತಗುಲಿದ್ದು, ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ.
ಇಂದು ಬೆಳಗಿನ ಜಾವ ಮೆಟ್ರೋ ನಿಲ್ದಾಣದ ಬಳಿ ನಿಂತಿದ್ದ ಬೈಕ್ ಗಳಿಗೆ ಏಕಾಏಕಿ ಬೆಂಕಿ ತಗುಲಿದ್ದು, ಸುಟ್ಟು ಕರಕಲಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸವಾರರು ಬೈಕ್ ಕಳೆದುಕೊಂಡು ಕಂಗಾಲಾಗಿದ್ದಾರೆ.







