ಕಾರ್ಖಾನೆಯೊಂದರಲ್ಲಿ ಅಗ್ನಿ ದುರಂತ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಅಮೃತಸರದ ಫಾರ್ಮಾಸ್ಯುಟಿಕಲ್ ಫ್ಯಾಕ್ಟರಿಯಲ್ಲಿಯೇ ಈ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ನಗರದ ಮಜಿತಾ ರಸ್ತೆಯಲ್ಲಿರುವ ಫ್ಯಾಕ್ಟರಿ. ಕಾರ್ಖಾನೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ರಾಸಾಯನಿಕ ಇರುವ ಹಿನ್ನೆಲೆಯಲ್ಲಿ ಈ ಬೆಂಕಿ ಆವರಿಸಿದ ಎನ್ನಲಾಗಿದೆ. ಆದರೆ, ಘಟನೆಗೆ ಮಾತ್ರ ನಿಖರ ಕಾರಣ ತಿಳಿದು ಬಂದಿಲ್ಲ.
ಕಾರ್ಖಾನೆಯಲ್ಲಿ ಹಲವು ಕೆಲಸಗಳು ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಕಾರ್ಮಿಕರು ಒಳಗಿದ್ದರು. ಈ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೂ ರಕ್ಷಣಾ ಕಾರ್ಯ ಮುಂದುವರೆದಿದೆ.