ಬೆಂಗಳೂರು: ನಗರದಲ್ಲಿ ಮತ್ತೆ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂ. ಮೌಲ್ಯದ ಬಟ್ಟೆಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.
ಸಿಲಿಕಾನ್ ಸಿಟಿಯ ಮಲ್ಲೇಶ್ವರಂ (Malleshwaram) ಹಾಗೂ ಮಾರತಹಳ್ಳಿ ಮುಖ್ಯರಸ್ತೆಯಲ್ಲಿ ಮಧ್ಯರಾತ್ರಿ ಈ ಅಗ್ನಿ ಅವಘಡ ಸಂಭವಿಸಿವೆ. ಮಾರತಹಳ್ಳಿಯ ಮುಖ್ಯರಸ್ತೆಯಲ್ಲಿನ ಕಟ್ಟಡವೊಂದರಲ್ಲಿ ಟ್ರಾನ್ಸ್‌ಫಾರ್ಮರ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಈ ಘಟನೆ ಸಂಭವಿಸಿದೆ. ಪರಿಣಾಮ ಬಿಲ್ಡಿಂಗ್ ನಲ್ಲಿದ್ದ 4 ಅಂಗಡಿಗಳು ಸುಟ್ಟು ಹೋಗಿವೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಅದೃಷ್ಟವಶಾತ್ ಕಟ್ಟಡದಲ್ಲಿ ಮಲಗಿದ್ದ ಮೂವರು ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಲ್ಲದೇ, ಸಂಪಿಗೆ ರಸ್ತೆಯ ಸಿಗ್ನಲ್ ಬಳಿಯ ಬಟ್ಟೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಂಗಡಿಯಲ್ಲಿದ್ದ ಬಟ್ಟೆಗಳು ಸುಟ್ಟುಹೋಗಿವೆ. ಕಂಪ್ಯೂಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಅವಘಡ ಸಂಭವಿಸಿದೆ ಎನ್ನಲಾಗಿದೆ. ಆದರೆ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.