ಒಟ್ಟಾವೊ: ಕೆನಡಾದ ಒಂಟಾರಿಯೊ ಪ್ರಾಂತ್ಯದ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಭಾರತೀಯ ಮೂಲದ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಮಾರ್ಚ್ 7ರಂದು ನಡೆದಿದ್ದು, ಭಾರತೀಯ ಮೂಲದ ದಂಪತಿ ಮತ್ತು ಅವರ ಮಗಳು ಸಾವನ್ನಪ್ಪಿದ್ದಾರೆ. ಒಂದೇ ಕುಟುಂಬದ ಮೂವರ ಅವೇಶಷ ಕಂಡು ಬಂದ ನಂತರ ಈ ವಿಚಾರ ಬೆಳಕಿಗೆ ಬಂದಿದೆ. ಕುಟುಂಬವು ಬ್ರಾಂಪ್ಟನ್ನ ಬಿಗ್ ಸ್ಕೈ ವೇ ಮತ್ತು ವ್ಯಾನ್ ಕಿರ್ಕ್ ಡ್ರೈವ್ ಪ್ರದೇಶದಲ್ಲಿ ವಾಸಿಸುತ್ತಿತ್ತು.
ಅಕ್ಕಪಕ್ಕದವರು ಪೊಲೀಸರಿಗೆ ಮಾಹಿತಿ ನೀಡಿದಾಗ ಈ ವಿಷಯ ಬೆಳಕಿಗೆ ಬಂದಿದೆ. ಅಗ್ನಿಶಾಮಕದಳ ಬೆಂಕಿಯನ್ನು ನಂದಿಸಿದಾಗ ಮೃತರ ಅವಶೇಷಗಳು ಪತ್ತೆಯಾಗಿವೆ. ರಾಜೀವ್ ವಾರಿಕೂ (51), ಅವರ ಪತ್ನಿ ಶಿಲ್ಪಾ ಕೋಥಾ (47) ಮತ್ತು ಅವರ ಮಗಳು ಮಾಹೆಕ್ ವಾರಿಕೂ (16) ಸಾವನ್ನಪ್ಪಿದ್ದಾರೆ ಎಂದು ಗುರುತಿಸಲಾಗಿದೆ. ಆದರೆ, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.