ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ : 16 ಮಂದಿ ಸಾವು

1 min read
Gandinagara

ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ : 16 ಮಂದಿ ಸಾವು

ಗಾಂಧಿನಗರ : ದೇಶದಲ್ಲಿ ಕೊರೊನಾ ಎರಡನೇ ಅಲೆ ಯಾರೂ ಊಹಿಸದ ರೀತಿಯಲ್ಲಿ ಹರಡುತ್ತಾ ಜನರ ಪ್ರಾಣವನ್ನ ತೆಗೆದುಕೊಳ್ಳುತ್ತಿದೆ.

ವಿಶ್ವದಲ್ಲೇ ಯಾವ ದೇಶದಲ್ಲೂ ಇಲ್ಲದ ರೀತಿಯಲ್ಲಿ ಭಾರತದಲ್ಲಿ ಕೊರೊನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆಗಳಲ್ಲಿ 4 ಲಕ್ಷಕ್ಕೂ ಅಧಿಕ ಕೇಸ್ ಗಳು ಪತ್ತೆಯಾಗಿದೆ.

ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್ ಸಮಸ್ಯೆ ಉಂಟಾಗುತ್ತಿದೆ. ಇದರಿಂದಲೂ ಎಷ್ಟೋ ಮಂದಿ ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.

Gandinagara

ಈ ಮಧ್ಯೆ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿ 16 ಮಂದಿ ಮೃತಪಟ್ಟಿರುವ ಘಟನೆ ಗುಜರಾತ್ ನ ಭಾರುಚ್ ಆಸ್ಪತ್ರೆಯಲ್ಲಿ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಸಂಭವಿಸಿದೆ.

ಘಟನೆಯಿಂದ ಸುಮಾರು 16 ಮಂದಿ ಕೊರೊನಾ ಸೋಂಕಿತರು ಸಜೀವ ದಹನವಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಮೋಧ್ಯ ಮಾಹಿತಿ ನೀಡಿದ್ದಾರೆ.

ನಾಲ್ಕು ಮಹಡಿಯ ಆಸ್ಪತ್ರೆ ಇದಾಗಿದ್ದು, ಸುಮಾರು 70 ಮಂದಿ ಚಿಕಿತ್ಸೆ ಪಡೆಯುತ್ತಿದ್ದರು.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd