ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿನ ಚರ್ಚ್ ಸ್ಟ್ರೀಟ್ (Church Street) ಕಟ್ಟಡವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಆತಂಕ ಮನೆ ಮಾಡಿತ್ತು.
ಬೆಂಕಿಯಿಂದಾಗಿ ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದೆ. ಹೊಗೆಯಿಂದ ಜನರಲ್ಲಿ ಆತಂಕ ಮೂಡಿದ್ದು, ಸ್ಥಳಕ್ಕೆ 3 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ನೆಲಮಂಗಲ ತಾಲೂಕಿನ ಟಿ.ಬೇಗೂರು ಸಮೀಪದ ಅಗಸರಹಳ್ಳಿ ಗ್ರಾಮದಲ್ಲಿ ವಿದ್ಯುತ್ ಏರಿಳಿತದಿಂದಾಗಿ 7 ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಕೂಡ ನಡೆದಿದೆ. ಇದರಿಂದಾಗಿ ಮನೆಯಲ್ಲಿದ್ದ ಎಲೆಕ್ಟ್ರಾನಿಕ್ ವಸ್ತುಗಳೆಲ್ಲ ಸುಟ್ಟು ಭಸ್ಮವಾಗಿವೆ. ಹೀಗಾಗಿ ಜನರು ಬೆಸ್ಕಾಂ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.