ಮುಂಬಯಿನಲ್ಲಿನ ಬಹುಮಹಡಿ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ.
ಮುಂಬಯಿನ ಕಂದೀವಾಲಿಯ ಬಹುಮಹಡಿ ಕಟ್ಟಡದಲ್ಲಿಯೇ ಈ ಅವಘಡ ಸಂಭವಿಸಿದೆ. ಮಹಾವೀರ ನಗರದ ಪವನ್ಧಾಮ್ ವೀಣಾ ಸಂತೂರ್ ಕಟ್ಟಡದಲ್ಲಿ ಈ ದುರ್ಘಟನೆ ನಡೆದಿದೆ. ಮೊದಲನೇ ಮಹಡಿಯಲ್ಲಿದ್ದ ಎಲೆಕ್ಟ್ರಿಕ್ ವಸ್ತುಗಳಿಗೆ ಬೆಂಕಿ ತಗುಲಿತ್ತು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ 10 ವಾಹನಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿವೆ. ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.