ಗಾಂಧಿನಗರ: ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಕೊಂಡ ಪರಿಣಾಮ 24 ಜನ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಗುಜರಾತ್ನ (Gujarat) ಸೂರತ್ (Surat) ನಗರದಲ್ಲಿ ಈ ಘಟನೆ ನಡೆದಿದೆ. ಕೆಮಿಕಲ್ಸ್ ಫ್ಯಾಕ್ಟರಿ (Chemical Plant) ಒಂದರ ಟ್ಯಾಂಕ್ನಲ್ಲಿ ಸಂಗ್ರಹಿಸಿದ್ದ ರಾಸಾಯನಿಕ ಸ್ಫೋಟವಾದ ಪರಿಣಾಮ ಈ ಘಟನೆ ನಡೆದಿದೆ. ಸಚಿನ್ ಜಿಐಡಿಸಿ ಕೈಗಾರಿಕಾ ಪ್ರದೇಶದಲ್ಲಿನ ರಾಸಾಯನಿಕ ಕಾರ್ಖಾನೆಯಲ್ಲಿ ಮಧ್ಯರಾತ್ರಿ ಈ ಘಟನೆ ನಡೆದಿದೆ. ದೊಡ್ಡ ತೊಟ್ಟಿಯೊಳಗೆ ಶೇಖರಿಸಲಾದ ರಾಸಾಯನಿಕಗಳ ಸೋರಿಕೆಯಿಂದ ಸ್ಫೋಟ ಸಂಭವಿಸಿದೆ. ಆಗ ಬೆಂಕಿ ಕಾಣಿಸಿಕೊಂಡಿದ್ದು, ಅಲ್ಲಿದ್ದ ಕಾರ್ಮಿಕರು ಗಾಯಗೊಂಡಿದ್ದಾರೆ. 24 ಜನ ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಮೂರು ಅಂತಸ್ತಿನ ಕಟ್ಟಡಕ್ಕೂ ಬೆಂಕಿ ಆವರಿಸಿದೆ. ಹತ್ತಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಲು ಪ್ರಯತ್ನಿಸುತ್ತಿವೆ.