ಮುಂಬೈ : ಔಷಧಿ ಕಂಪನಿಯಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ 8 ಜನ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ (Maharashtra Fire) ರಾಯಗಢ ಜಿಲ್ಲೆಯಲ್ಲಿ ನಡೆದಿದೆ.
ಅಲ್ಲದೇ ಘಟನೆಯಲ್ಲಿ ಮೂವರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಜಿಲ್ಲೆಯ ಎಂಐಡಿಸಿ ಮಹಾಡ್ನಲ್ಲಿರುವ ಬ್ಲೂ ಜೆಟ್ ಹೆಲ್ತ್ಕೇರ್ ನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಈಗಾಗಲೇ ಘಟನೆಯಲ್ಲಿ 8 ಜನರ ಮೃತದೇಹಗಳು ಪತ್ತೆಯಾಗಿದ್ದು, ಇನ್ನುಳಿದ ಮೂವರು ನಾಪತ್ತೆಯಾಗಿದ್ದಾರೆ.
ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ರಾಸಾಯನಿಕಗಳಿಂದ ತುಂಬಿದ ಬ್ಯಾರೆಲ್ಗಳು ಸ್ಫೋಟಗೊಳ್ಳಲು ಇದೇ ಕಾರಣವಾಗಿರಬಹುದು ಎನ್ನಲಾಗುತ್ತಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.