ಚಂಡೀಗಢ: ರಬ್ಬರ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅಪಘಡ ಸಂಭವಿಸಿದ ಪರಿಣಾಮ 40ಕ್ಕೂ ಅಧಿಕ ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಸೋನಿಪತ್ (Sonipat) ಜಿಲ್ಲೆಯ ರಾಯ್ ಕೈಗಾರಿಕಾ ಪ್ರದೇಶದ ರಬ್ಬರ್ ಕಾರ್ಖಾನೆಯಲ್ಲಿ (Rubber Factory) ಈ ಘಟನೆ ನಡೆದಿದೆ. ಕಾರ್ಖಾನೆಯಲ್ಲಿ ಸಿಲಿಂಡರ್‌ಗಳು (Cylinder) ಸ್ಫೋಟಗೊಂಡಿದ್ದು, 40ಕ್ಕೂ ಅಧಿಕ ಜನ ಕಾರ್ಮಿಕರು ಸುಟ್ಟು ಭಸ್ಮವಾಗಿದ್ದಾರೆ.
ಅಲ್ಲದೇ, ಇನ್ನೂ ಹಲವು ಕಾರ್ಮಿಕರನ್ನು ರಕ್ಷಿಸಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿವೆ. 16 ಜನ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಲವರ ಸ್ಥಿತಿ ಗಂಭೀರವಾಗಿದೆ.