ಮುಂಬಯಿ: ಇಲ್ಲಿಯ ಕಮಲಾ ಮಿಲ್ ಕಾಂಪೌಂಡ್ ನ (Kamala Mill Compound) ಲೋವರ್ ಪರೇಲ್ ನಲ್ಲಿ (Lower Parel) ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಸಾಕಷ್ಟು ನಷ್ಟ ಉಂಟಾಗಿರುವ ಘಟನೆ ನಡೆದಿದೆ.
ಏಳು ಅಂತಸ್ತಿನ ಕಟ್ಟಡ ಟೈಮ್ಸ್ ಟವರ್ ನಲ್ಲಿ (Times Tower) ಬೆಂಕಿ ಕಾಣಿಸಿಕೊಂಡಿದ್ದು, ಭಾರೀ ಅಗ್ನಿ ಅವಘಡ ಸಂಭವಿಸಿದೆ ಎಂದು ಬೃಹತ್ ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು (BMC) ಹೇಳಿದ್ದಾರೆ. ಜೊತೆಗೆ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಹೇಳಿದ್ದಾರೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಒಂಭತ್ತು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. 14 ಅಂತಸ್ತನ್ನು ಹೊಂದಿರುವ ಕಟ್ಟಡದಲ್ಲಿ 3 ರಿಂದ 7 ಮಹಡಿಯವರೆಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 2017ರಲ್ಲಿ ಕೂಡ ಮುಂಬಯಿನ ರೆಸ್ಟೋರೆಂಟ್ ಗೆ ಬೆಂಕಿ ಬಿದ್ದ ಪರಿಣಾಮ 14 ಜನರು ಸಾವನ್ನಪ್ಪಿದ್ದರು.