ಕಾಸರಗೋಡು: ಇಲ್ಲಿನ ನೀಲೇಶ್ವರಂ ಹತ್ತಿರವಿರುವ ದೇವಸ್ಥಾನದ (Neeleswaram Temple) ಉತ್ಸವದ ವೇಳೆ ಪಟಾಕಿ (Fireworks) ದುರಂತ ಸಂಭವಿಸಿ 150 ಜನ ಗಾಯಗೊಂಡಿದ್ದು, 8 ಜನರ ಸ್ಥಿತಿ ಗಂಭೀರವಾಗಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವೀರರ್ಕಾವು ದೇವಸ್ಥಾನದ ಬಳಿಯ ಪಟಾಕಿ ಸಂಗ್ರಹಾಗಾರಕ್ಕೆ ಬೆಂಕಿ ತಗುಲಿ ಈ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿ, ಎಸ್ಪಿ ಸೇರಿದಂತೆ ಅಧಿಕಾರಿಗಳು ಆಗಮಿಸಿದ್ದಾರೆ.
ದೇವಸ್ಥಾನದ ಅಧಿಕಾರಿಗಳು ಪಟಾಕಿ ಸಿಡಿಸಲು ಅನುಮತಿ ಪಡೆದಿದರಲಿಲ್ಲ. ಪೊಲೀಸರು ದೇವಸ್ಥಾನದ ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪ್ರಾಥಮಿಕ ತನಿಖೆ ಈಗಾಗಲೇ ಆರಂಭವಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.
ದೇವಾಲಯದ ಗೋಡೆಗೆ ಹೊಂದಿಕೊಂಡಂತೆ ನಿರ್ಮಿಸಲಾದ ತಾತ್ಕಾಲಿಕ ಶೆಡ್‌ನಲ್ಲಿ ಪಟಾಕಿಗಳನ್ನು ಸಂಗ್ರಹಿಸಿಡಲಾಗಿತ್ತು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಮೂವಳಂಕುಜಿ ಚಾಮುಂಡಿ ತೆಯ್ಯಂನ ‘ವೆಳ್ಳಟ್ಟಂ ಪುರಪ್ಪಡು’ಗೆ ಸಂಬಂಧಿಸಿದಂತೆ ಪಟಾಕಿ ಸಿಡಿಸುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.








