ನೆಲಮಂಗಲ: ಬಾಲರಾಮನ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಕ್ಷಣಕ್ಕಾಗಿ ದೇಶದ ಜನರು ಭಕ್ತಿಯಿಂದ ಕಾಯುತ್ತಿದ್ದಾರೆ. ಈ ವೇಳೆ ವ್ಯಕ್ತಿಯೊಬ್ಬ ವಿವಾದಾತ್ಮಕ ಹೇಳಿಕೆ ನೀಡಿದ್ದು, ಆಕ್ರೋಶ ವ್ಯಕ್ತವಾಗಿದೆ.
‘ಆ ದಿನ ನೆತ್ತರು ಹರಿಯುವುದು ಗ್ಯಾರಂಟಿ. ರಾಮಮಂದಿರ ಉರುಳಿಸಿ ಅದೇ ಜಾಗದಲ್ಲಿ ಮಸೀದಿ ನಿರ್ಮಾಣ ಆಗುತ್ತೆ ಎಂದು ಹೇಳಿದ್ದು, ಈ ಕುರಿತು ಎಫ್ ಐಆರ್ ದಾಖಲಾಗಿದೆ.
ನೆಲಮಂಗಲ ಭಜರಂಗದಳದಿಂದ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಹುಸೇನ್ ಎಂಬ ವ್ಯಕ್ತಿಯ ಹೇಳಿಕೆ ಪಡೆದಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ನೆಲಮಂಗಲ ಉಪವಿಭಾಗದ ಪೊಲೀಸರು ಅಲರ್ಟ್ ಆಗಿದ್ದು, ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿದ್ದಾರೆ.