ಮಡಿಕೇರಿ: ಕೊಡಗು ಜಿಲ್ಲೆಯ ಬ್ರಹ್ಮಗಿರಿ ವನ್ಯಧಾಮದ ವ್ಯಾಪ್ತಿಯಲ್ಲಿ ಕೂಂಬಿಂಗ್ ನಡೆಸುವ ವೇಳೆ ನಕ್ಷಲ್ ನಿಗ್ರಹ ಪಡೆಗಳ ಮೇಲೆ ಕಾಡಾನೆ ದಾಳಿ ಮಾಡಿದೆ.
ಬಿರುನಾಣಿ ವ್ಯಾಪ್ತಿಯಲ್ಲಿ ಏಕಾಏಕಿ ಕಾಡಾನೆಯೊಂದು ಎಎನ್ಎಫ್ ತಂಡದ ಮೇಲೆ ದಾಳಿ ಮಾಡಿದೆ. ಈ ವೇಳೆ ಗಾಬರಿಗೊಂಡ ತಂಡದಲ್ಲಿನ ಸಿಬ್ಬಂದಿ ಶ್ರೀಧರ್ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದರೆ.

ಕಾಡಾನೆ ದಾಳಿ ಹಿನ್ನೆಲೆಯಲ್ಲಿ ಎಎನ್ಎಫ್ ಸಿಬ್ಬಂದಿ ತಾತ್ಕಾಲಿಕವಾಗಿ ಕೂಂಬಿಗ್ ಸ್ಥಗಿತಗೊಳಿಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಪೋಲಿಸ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡ ಎಎನ್ಎಫ್ ಸಿಬ್ಬಂದಿ ಶ್ರೀಧರ್ಗೆ ಗೋಣಿಕೊಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








