ನೆರಮನೆ ಯುವಕನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ…
ನೆರೆಮನೆಯ ಯುವಕ ಪ್ರೀತಿಸುವಂತೆ ಪ್ರತಿದಿನ ಕಿರುಕುಳ ಕೊಡುತ್ತಿದ್ದ ಹಿನ್ನೆಲೆ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನಲ್ಲಿ ನಡೆದಿದೆ…
ಹೊಸನಗರ ತಾಲೂಕಿನ ವಸವೆ ಗ್ರಾಮದ ನಿವಾಸಿ ಕುಂಟಿಗೆಯ ಪಟೇಲ್ ಈಶ್ವರಪ್ಪ ಗೌಡ ಪುತ್ರಿ 21 ವರ್ಷದ ವಿದ್ಯಾಶ್ರೀ ನೇಣಿಗೆ ಕೊರಳೊಡ್ಡಿದ್ದಾಳೆ. ವಿದ್ಯಾಶ್ರೀ ಹೊಸನಗರದ ಕೊಡಚಾದ್ರಿ ಪದವಿ ಕಾಲೇಜಿನಲ್ಲಿ ಬಿ.ಕಾಂ ಪದವಿ ವ್ಯಾಸಂಗ ಮಾಡುತ್ತಿದ್ದಳು. ನೆರೆ ಮನೆಯ ಯುವಕ ಶಶಾಂಕ್, ವಿದ್ಯಾಶ್ರೀ ಪ್ರತಿ ನಿತ್ಯ ಕಾಲೇಜಿ ಹೋಗುವಾಗ ಬರುವಾಗ ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ.
ಇದರಿಂದ ಮನನೊಂದ ಆಕೆ, ಏಪ್ರಿಲ್ 19ರಂದು ಮನೆಯಲ್ಲಿಯೇ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಕೂಡಲೇ ವಿದ್ಯಾರ್ಥಿನಿಯನ್ನು ಮಣಿಪಾಲ್ ನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಭಾನುವಾರ ರಾತ್ರಿ ಸಾವನ್ನಪ್ಪಿದ್ದಾಳೆ.
ಈ ಸಾವಿಗೆ ಶಶಾಂಕ್ ಕಾರಣ ಆತನನ್ನು ಬಂಧಿಸಿ ಎಂದು ವಿದ್ಯಾಶ್ರೀ ಸಹೋದರ ರಕ್ಷಿತ್ ಪೊಲೀಸರಿಗೆ ದೂರು ಕೊಟ್ಟಿದ್ದಾನೆ. ಪ್ರಸ್ತುತ ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








