ಶಾಲೆಯಿಂದ ಮನೆಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ ನಡೆಸಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಮಧ್ಯಪ್ರದೇಶ(Madhyapradesh)ದ ರೇವಾ ಜಿಲ್ಲೆಯಲ್ಲಿ ನಡೆದಿದೆ. 12 ವರ್ಷದ ಬಾಲಕಿ ಮನೆಗೆ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಅಪಹರಿಸಿದ್ದಾರೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಜನಿ ಕೇವತ್ (23) ನನ್ನು ಪೊಲೀಸರು ಬಂಧಿಸಿದ್ದಾರೆ.
5 ನೇ ತರಗತಿ ವಿದ್ಯಾರ್ಥಿನಿಹೋಗುತ್ತಿದ್ದಾಗ ಆರೋಪಿಯು ತನ್ನ ಗ್ರಾಮಕ್ಕೆ ಲಿಫ್ಟ್ ನೀಡಲು ಮುಂದಾಗಿದ್ದ ಎಂದು ಅಧಿಕಾರಿ ಹೇಳಿದ್ದಾರೆ. ಆಗ ಕೇವತ್ ಬಾಲಕಿಯನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ. ಆನಂತರ ಉತ್ತರ ಪ್ರದೇಶದ ಗಡಿಗೆ ಸಮೀಪದಲ್ಲಿರುವ ಆಕೆಯ ಗ್ರಾಮದ ಹತ್ತಿರ ಬಾಲಕಿಯನ್ನು ಬಿಟ್ಟು ಹೋಗಿದ್ದಾನೆ ಎಂದು ಹೇಳಿದ್ದಾರೆ.
ಬಾಲಕಿ ತನ್ನ ಕುಟುಂಬ ಸದಸ್ಯರಿಗೆ ಹಲ್ಲೆಯ ಬಗ್ಗೆ ತಿಳಿಸಿದ್ದಾಳೆ, ನಂತರ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.