ಬೆಂಗಳೂರು: ರಾಜ್ಯ ಸರ್ಕಾರವು ನುಡಿದಂತೆ ನಡೆದಿದೆ. ತಾನು ಘೋಷಿಸಿದ್ದ ಸರ್ಕಾರ ನುಡಿದಂತೆ ನಡೆದಿದೆ. 5 ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.
ಗಣರಾಜ್ಯೋತ್ಸವದ ಅಂಗವಾಗಿ ಇಲ್ಲಿಯ ಮಾಣಿಕ್ ಶಾ ಗ್ರೌಂಡ್ ನಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ಶಕ್ತಿ ಯೋಜನೆಯಡಿಯಲ್ಲಿ 134.34 ಕೋಟಿ ಜನರು ಉಚಿತ ಪ್ರಯಾಣ ಮಾಡಿದ್ದಾರೆ. ಅನ್ನಭಾಗ್ಯ ಯೋಜನೆಯಡಿ 2900.12 ಕೋಟಿ ಹಣ ಫಲಾನುಭವಿಗಳಿಗೆ ವರ್ಗಾವಣೆ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಯಡಿ 1.50 ಕೋಟಿ ಗ್ರಾಹಕರು ಯೋಜನೆಯ ಲಾಭ ಮಾಡಿಕೊಂಡಿದ್ದಾರೆ. 700 ಕೋಟಿ ಗೃಹಜ್ಯೋತಿಗಾಗಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ 223 ತಾಲೂಕುಗಳನ್ನು ಬರ ಎಂದು ಘೋಷಿಸಲಾಗಿದ್ದು, ಪರಿಹಾರವಾಗಿ ರೈತರಿಗೆ 2 ಸಾವಿರ ಮಧ್ಯಂತರ ಪರಿಹಾರ ನೀಡಲಾಗಿದೆ. ಕುಡಿಯುವ ನೀರು, ಮೇವು, ಪರಿಹಾರ ಕ್ರಮಗಳಿಗಾಗಿ ಶಾಸಕರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದೆ. ರೈತ ಸಿರಿ ಯೋಜನೆ ಅಡಿ ಸಿರಿಧಾನ್ಯ ಬೆಳೆಗಾರರಿಗೆ ಹೆಕ್ಟೇರ್ ಗೆ 10 ಸಾವಿರ ದಂತೆ ಗರಿಷ್ಠ 2 ಹೆಕ್ಟೇರ್ ಗೆ ಪ್ರೋತ್ಸಾಹ ಧನ ನೀಡಲಾಗುತ್ತಿದೆ ಎಂದು ಹೇಳಿದರು. ಅಲ್ಲದೇ, ರಾಜ್ಯ ಸರ್ಕಾರದ ಯೋಜನೆಗಳ ಕುರಿತು ಮಾತನಾಡಿದರು. ಸಿಎಂ ಸಿದ್ದರಾಮಯ್ಯ ಸೇರಿದಂತೆ ಅಧಿಕಾರಿಗಳು ಇದ್ದರು.