ಬೆಂಗಳೂರು: 2020-21 ಸಾಲಿನ ಪರಿಷ್ಕೃತ ಬಜೆಟ್ ಮಂಡಿಸಿದ ಸಿಎಂ ಬಿ.ಎಸ್ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಕ್ಷೇತ್ರಕ್ಕೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಸಿದ್ದರಾಮಯ್ಯ ಕ್ಷೇತ್ರ ಬಾದಾಮಿ ಅಭಿವೃದ್ಧಿಗೆ 25 ಕೋಟಿ ರೂ. ಅನುದಾನವನ್ನು ಮುಖ್ಯಮಂತ್ರಿ ಘೋಷಣೆ ಮಾಡಿದ್ದಾರೆ. ಇನ್ನು ಕೊಪ್ಪಳದಲ್ಲಿ ಆಂಜನೇಯ ದೇವಸ್ಥಾನ ಅಭಿವೃದ್ಧಿ 20 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಸಿಎಂ ಬಿಎಸ್ ವೈ ತಿಳಿಸಿದ್ದಾರೆ. ಹಾವೇರಿಯಲ್ಲಿ 20 ಹಾಸಿಗೆಗಳ ಆಯುಷ್ ಆಸ್ಪತ್ರೆ, 17 ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ಎನ್‌ಐಸಿಯು ಉನ್ನತೀಕರಣ , ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಸಿಮ್ಯುಲೇಶನ್ ಲ್ಯಾಬ್ & ಮಾಲಿಕ್ಯುಲರ್ ಬಯಾಲಜಿ ಲ್ಯಾಬ್ ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.
ನಾನು ಚುನಾವಣೆಗೆ ಸ್ಪರ್ಧಿಸಲ್ಲ ಯಾಕೆ ಗೊತ್ತಾ? ರಿಯಲ್ ಸ್ಟಾರ್ ಉಪೇಂದ್ರ ನೀಡಿದ ಉತ್ತರ ಕೇಳಿ ದಂಗಾದ ಅಭಿಮಾನಿಗಳು
ಕನ್ನಡ ಚಿತ್ರರಂಗದ ವಿಭಿನ್ನ ಆಲೋಚನೆಗಳ ಸರದಾರ ರಿಯಲ್ ಸ್ಟಾರ್ ಉಪೇಂದ್ರ ಅವರು ಪ್ರಜಾಕೀಯ ಎಂಬ ಹೊಸ ರಾಜಕೀಯ ಕ್ರಾಂತಿಗೆ ನಾಂದಿ ಹಾಡಿದ್ದಾರೆ. ಪ್ರಜಾಕೀಯ ಪಕ್ಷ ಸ್ಥಾಪನೆಯಾದಾಗಿನಿಂದಲೂ ಎಲ್ಲರ...








