ಮಾಲ್ಡೀವ್ಸ್ ಅಧ್ಯಕ್ಷ ಡಾ. ಮೊಹಮ್ಮದ್ ಮುಯಿಜ್ಜು ಹಾಗೂ ಪ್ರಥಮ ಮಹಿಳೆ ಸಾಜಿದಾ ಮೊಹಮ್ಮದ್ ಅವರು ಬೆಂಗಳೂರಿಗೆ ಆಗಮಿಸಿದ್ದು, ಭವ್ಯವಾಗಿ ಸ್ವಾಗತಿಸಲಾಗಿದೆ.
ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಈ ವೇಳೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಉಮಾ ಮಹದೇವನ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಇದ್ದರು.
ಇತ್ತೀಚೆಗಷ್ಟೇ ಭಾರತೀಯ ಮಾಲ್ಡೀವ್ಸ್ ವಿರುದ್ಧ ಸಮರ ಸಾರದಂತೆ ಮಾಡಿದ್ದರು. ಮಾಲ್ಡೀವ್ಸ್ ಗೆ ಹೋಗುವವರ ಸಂಕ್ಯೆ ಕಡಿಮೆಯಾಗಿತ್ತು. ಈ ಹಿನ್ನೆಲೆಯಲ್ಲಿ ಮುಯಿಜ್ಜು, ತನ್ನ ಸಂಬಂಧವನ್ನು ಮರು ಸ್ಥಾಪಿಸಲು ದೇಶಕ್ಕೆ ಆಗಮಿಸಿದ್ದಾರೆ. ಪ್ರಧಾನಿ ಮೋದಿ ಅವರು ಇತ್ತೀಚೆಗಷ್ಟೇ ಸ್ವಾಗತಿಸಿದ್ದರು. ಈ ವೇಳೆ ಸಂಬಂಧ ವೃದ್ಧಿಯ ಭರವಸೆಯನ್ನು ಪ್ರಧಾನಿ ನೀಡಿದ್ದರು. ಆನಂತರ ರಾಷ್ಟ್ರಪತಿ ಭವನಕ್ಕೆ ಆಗಮಿಸಿದ ಮಾಲ್ಡೀವ್ಸ್ ಅಧ್ಯಕ್ಷ ಮತ್ತು ಪ್ರಥಮ ಮಹಿಳೆ ಸಾಜಿದಾ ಮೊಹಮ್ಮದ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ದ್ವಿಪಕ್ಷೀಯ ಸಭೆ ನಡೆಸಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದರು.