ಮಂಗಳೂರು: ಹೊಸ ವರ್ಷಾರಂಭದ ಹಿನ್ನೆಲೆಯಲ್ಲಿ ಭಕ್ತರು ದೇವಸ್ಥಾನಗಳಿಗೆ ಹೋಗುತ್ತಿದ್ದಾರೆ. ಹೀಗಾಗಿ ಎಲ್ಲ ದೇವಸ್ಥಾನಕ್ಕೆ ಭಕ್ತರ ದಂಡು ಹರಿದು ಬರುತ್ತಿದೆ.
ಕರಾವಳಿಯ ದೇವಸ್ಥಾನಗಳಿಗೆ ಭಕ್ತರ ದಂಡೇ ಹರಿದು ಬಂದಿದೆ. ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನ ಹಾಗೂ ಧರ್ಮಸ್ಥಳ ಮಂಜುನಾಥೇಶ್ವರ ದೇಗುಲಕ್ಕೆ ಲಕ್ಷಾಂತರ ಭಕ್ತರು ತೆರಳಿದ್ದಾರೆ. ಭಕ್ತರು ದೇಗುಲಗಳಿಗೆ ಆಗಮಿಸಿ ದೇವರ ದರ್ಶನ ಪಡೆದು ಹೊಸ ವರ್ಷದ ದಿನಾರಂಭ ಮಾಡುತ್ತಿದ್ದಾರೆ.
ಕದ್ರಿ ಮಂಜುನಾಥ ದೇಗುಲಕ್ಕೆ ಬೆಳಗ್ಗಿನಿಂದಲೂ ನೂರಾರು ಭಕ್ತರು ಆಗಮಿಸುತ್ತಿದ್ದಾರೆ. ದೇವಳದ ಕೆರೆಯಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿದ್ದಾರೆ. ದೇವಳದ ಮುಂದೆ ಕಲಶ ಸ್ನಾನ ಮಾಡುತ್ತಿದ್ದಾರೆ. ಕದ್ರಿ ದೇವಳದಲ್ಲಿ ಕಲಶ ಸ್ನಾನ ಸೇವೆ ಸಾಕಷ್ಟು ಪ್ರಸಿದ್ಧಿ ಪಡೆದಿದೆ.
ಧರ್ಮಸ್ಥಳದಲ್ಲಿ ಭಕ್ತ ಸಾಗರವೇ ನೆರೆದಿದೆ. ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿದ ಭಕ್ತರ ದಂಡು ಮಂಜುನಾಥ ಸ್ವಾಮಿಯ ದರ್ಶನಕ್ಕೆ ಮುಗಿಬಿದ್ದಿದೆ. ಬೆಂಗಳೂರು ಹಾಗೂ ಉತ್ತರ ಕರ್ನಾಟಕ ಭಾಗದಿಂದ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ದೇವಸ್ಥಾನದ ಕ್ಯೂ ಸೆಂಟರ್ ನಲ್ಲಿ ಭಾರೀ ಜನಜಂಗುಳಿ ಏರ್ಪಟ್ಟಿದೆ.
ಮೈಸೂರು, ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಪ್ರದೇಶಗಳ ದೇಗುಲಗಳಲ್ಲಿ ಬೆಳಗ್ಗೆ ಭಕ್ತ ಸಮೂಹ ದೇವರ ದರ್ಶನಕ್ಕೆ ಆಗಮಿಸಿದೆ.
ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ
ಮಾರ್ಚ್ 17 ಕರುನಾಡಿಗೆ ಕೇವಲ ಒಂದು ದಿನಾಂಕವಲ್ಲ, ಅದೊಂದು ಹಬ್ಬ. ಕನ್ನಡ ಚಿತ್ರರಂಗದ ಹೆಮ್ಮೆಯ ಪುತ್ರ, ಕರುನಾಡಿನ ಅಚ್ಚುಮೆಚ್ಚಿನ ಅಪ್ಪು, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ...








